BIG NEWS: ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಕೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ಮೈಸೂರು-ಕೊಡಗು ಲೋಕಸಭಾ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಇಂದು ಸಂಸದ ಪ್ರತಾಪ್ ಸಿಂಹ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಲ ಕಾಲ ಸಮಾಲೋಚನೆ ನಡೆಸಿದರು.

ಈ ವೇಳೆ ಪ್ರತಾಪ್ ಸಿಂಹ ತಾವು ಮಾಡಿರುವ ಕ್ಷೇತ್ರದ ಅಭಿವೃದ್ಧಿ ರಿಪೋರ್ಟ್ ಕಾರ್ಡನ್ನು ನೀಡಿದ್ದಾರೆ. ಇನ್ನು ಪ್ರತಾಪ್ ಸಿಂಹ ಈ ಬಾರಿಯೂ ಮೈಸೂರೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಈ ನಿಟ್ಟಿನಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read