ನವದೆಹಲಿ: ಖ್ಯಾತ ಕಾನೂನು ತಜ್ಞ, ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಅವರು, ಫಾಲಿ ನಾರಿಮನ್ ಜೀ ಅವರು ಅತ್ಯುತ್ತಮ ಕಾನೂನು ತಜ್ಞರು ಮತ್ತು ಬುದ್ಧಿಜೀವಿಗಳಲ್ಲಿ ಒಬ್ಬರು. ಸಾಮಾನ್ಯ ನಾಗರಿಕರಿಗೆ ನ್ಯಾಯ ದೊರಕುವಂತೆ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ನಿಧನದಿಂದ ನನಗೆ ನೋವಾಗಿದೆ. ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.
https://twitter.com/narendramodi/status/1760158148948849094?ref_src=twsrc%5Etfw%7Ctwcamp%5Etweetembed%7Ctwterm%5E1760158148948849094%7Ctwgr%5Eff5c131201df84a52ae697b939b7f319ab0a7204%7Ctwcon%5Es1_c10&ref_url=https%3A%2F%2Fapi-news.dailyhunt.in%2F