ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆಸಕ್ತರು ತರಬೇತಿಗೆ ನೋಂದಾಯಿಸಿಕೊಳ್ಳಬಹುದು.
ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಫೆ.27 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಅಥವಾ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.