ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿಗೆ ಗಂಡು ಮಗು ಜನಿಸಿದ್ದು, ಈ ಸುದ್ದಿ ಹೊರಬೀಳುತ್ತಿದ್ದಂತೆಯೇ ಕೊಹ್ಲಿ ಅಭಿಮಾನಿಗಳು ಸಂತಸಗೊಂಡಿದ್ದು, ಸೆಲೆಬ್ರಿಟಿ ದಂಪತಿಗಳಿಗೆ ಶುಭ ಹಾರೈಸುತ್ತಿದ್ದಾರೆ.
ಫೆಬ್ರವರಿ 15ರಂದು ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಐದು ದಿನಗಳ ನಂತರ ದಂಪತಿ ಮಾಹಿತಿ ಹಂಚಿಕೊಂಡಿದ್ದಾರೆ. ಪುತ್ರನಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ದಂಪತಿಗೆ ಶುಭಾಶಯಗಳು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಅನುಷ್ಕಾ ಶರ್ಮಾ ಬಾಲಿವುಡ್ನ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದರೆ, ಭಾರತದ ಸ್ಟಾರ್ ಕ್ರಿಕೆಟಿಗ ಕೊಹ್ಲಿಯನ್ನು ಕ್ರಿಕೆಟ್ ಆಡಿದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನದ ಗಡಿಯಾಚೆಯಿಂದಲೂ ಕೊಹ್ಲಿ ಎಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ವಿರಾಟ್ ಕೊಹ್ಲಿಗೆ ಮಗ ಹುಟ್ಟಿದ್ದಕ್ಕೆ ಪಾಕಿಸ್ತಾನದಲ್ಲಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.