ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ 21 ವರ್ಷದೊಳಗಿನವರಿಗೆ ಸಿಗರೇಟ್ ಬ್ಯಾನ್ ಮಾಡಲು ಸರ್ಕಾರ ನಿರ್ಧರಿಸಿದ್ದು, ನಿಯಮ ಮೀರಿದ್ರೆ 1000 ರೂ. ದಂಡ ವಿಧಿಸುವ ಸಾಧ್ಯತೆಯಿದೆ.
ಸಿಗರೇಟ್ಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ ಇಂದು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿದೆ ಅಲ್ಲದೇ ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಲಾಗಿದ್ದು, ನಿಯಮ ಮೀರಿದರೆ 3 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು 2024ರ ಸಿಗರೇಟ್ ಸೇವನೆ ಮತ್ತು ಜಾಹೀರಾತು ನಿಷೇಧ, ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಿದರು.