![](https://kannadadunia.com/wp-content/uploads/2024/02/job-fair.png)
ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆಬ್ರವರಿ 26, ಮತ್ತು 27, 2024 ರಂದು ರಾಜ್ಯ ಮಟ್ಟದ ಬೃಹತ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಟಿತ ಕಂಪನಿ, ಉದ್ದಿಮೆ, ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಆಸಕ್ತ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ https://udyoga.skillconnet.kaushalkar.com/ ಈ ಲಿಂಕ್‍ದಲ್ಲಿ ನೋಂದಾಯಿಸಬೇಕು ಮತ್ತು ಉದ್ಯೋಗ ಮೇಳದ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಕಛೇರಿ ದೂರವಾಣಿ ಸಂಖ್ಯೆ:0836-2744474ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.