HomeKarnatakaಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.29 ರವರೆಗೆ ವಿಸ್ತರಿಸಲಾಗಿದೆ. 

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ವೃತ್ತಿಪರ, ಸ್ನಾತಕೋತ್ತರ ಪದವಿ ಕೋರ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು  ಮಾತ್ರ ಅರ್ಹರಾಗಿರುತ್ತಾರೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಪೆÇೀಷಕರ ಆದಾಯ 2.50 ಲಕ್ಷ ಇರಬೇಕು. ಪ್ರವರ್ಗ-2 2ಎ, 2ಬಿ, 3ಎ, 3ಬಿ ವರ್ಗದ ಪೆÇೀಷಕರ ಆದಾಯ 1 ಲಕ್ಷವಿರಬೇಕು. ವಿದ್ಯಾರ್ಥಿಗಳು ಇಲಾಖೆಯ ಆನ್‍ಲೈನ್ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ ತಾಂತ್ರಿಕದೋಷ ಕಂಡುಬಂದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಅಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.

For Latest News Updates, Join Our Whatsapp Community🚩
RELATED ARTICLES

Most Popular