ಬೆಂಗಳೂರು : ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಹಾಗೂ ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ಮಹತ್ವದ ತಿದ್ದುಪಡಿ ವಿಧೇಯಕ ಸೇರಿದಂತೆ ಇತರೆ 13 ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
2024 ನೇ ಸಾಲಿನ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಕರ್ನಾಟಕ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಕರ್ನಾಟಕದಲ್ಲಿ ಸಿಗರೇಟು ನಿಷೇಧದ ವಯೋಮಿತಿಯನ್ನು 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಶಾಲಾ ಕಾಲೇಜು ಆವರಣದಲ್ಲಿ ತಂಬಾಕು ಮಾರಾಟ ವಿಷೇಧ ಮಿತಿ ನೂರು ಯಾರ್ಡ್ ಇದ್ದಿದ್ದನ್ನು ನೂರು ಮೀಟರ್ ಎಂದು ಬದಲಾವಣೆ ಮಾಡಲಾಗಿದೆ.
ಅಂಗೀಕಾರಗೊಂಡ 2024ನೇ ಸಾಲಿನ 13 ವಿಧೇಯಕಗಳು
- ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ
- ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕ
- ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ
- ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ ವಿಧೇಯಕ)
- ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ
- ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ
- ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರುಗಳ ವಿಧೇಯಕ
- ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ
- ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕ
- ಅಂತರ್ ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ
- ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ
- ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ
- ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತ ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ