ಬೆಂಗಳೂರು: ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ ಮಳೆ ನೀರು ವ್ಯವಸ್ಥೆ ಒದಗಿಸಿ ಉತ್ಪಾದನೆ ಹೆಚ್ಚಿಸಲು ರಾಜ್ಯದ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆ ಮರು ಜಾರಿ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
2023 -24ನೇ ಸಾಲಿನಲ್ಲಿ 100 ಕೋಟಿ ರೂಪಾಯಿ ಅನುದಾನದಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಹೊಂಡ, ಬದು, ಪಾಲಿಥೀನ್ ಹೊದಿಕೆ, ತಂತಿ ಬೇಲಿ, ಪಂಪ್ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ನಲ್ಲಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.