ಇಂದಿನಿಂದ ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಸಿರಿಗೆರೆಯ ಗುರು ಶಾಂತೇಶ್ವರ ದಾಸೋಹ ಮಹಾಮಂಟಪ ಮುಂಭಾಗದಲ್ಲಿ ಫೆಬ್ರವರಿ 22 ರಿಂದ 24ರ ವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ.

ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಈ ಬಾರಿ ಸರಳವಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮ ವೀಕ್ಷಣೆಗಾಗಿ 5000 ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ದಾಸೋಹ ಮಂಟಪ ಒಳಭಾಗದಲ್ಲಿ ಒಂದು ಎಲ್ಇಡಿ ಹಾಗೂ ಆಟದ ಮೈದಾನದಲ್ಲಿ ಎರಡು ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ.

ಮೂರು ದಿನಗಳ ಕಾಲ ಬೆಳಗ್ಗೆಯಿಂದ ರಾತ್ರಿಯವರೆಗೆ ಬಿ. ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷಿ, ವಾಣಿಜ್ಯ, ಇತರೆ ಪರಿಕರ ವೀಕ್ಷಣೆಗಾಗಿ 60 ಸ್ಟಾಲ್ ಗಳ ವ್ಯವಸ್ಥೆ ಮಾಡಲಾಗಿದೆ. ಬರಗಾಲ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read