ಬೆಂಗಳೂರು : ರಾಜ್ಯದಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆ ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ.
ಆರೋಗ್ಯ ಇಲಾಖೆಯು ರಾಜ್ಯದಲ್ಲಿ 258 ಕೆ.ಎಫ್.ಡಿ.ಪರೀಕ್ಷೆ ನಡೆಸಿದ್ದು, ಪರೀಕ್ಷೆಯಲ್ಲಿ ಈವರೆಗೆ ಒಟ್ಟು 49 ಮಂಗನ ಖಾಯಿಲೆ ಪ್ರಕರಣಗಳು ಪತ್ತೆಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 12, ಉತ್ತರ ಕನ್ನಡ 34 ಹಾಗೂ ಚಿಕ್ಕಮಗಳೂರು ಮೂವರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ