ಬೆಂಗಳೂರು : ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ಇಂದು ಅಧಿಕಾರ ಸ್ವೀಕಾರ ಮಾಡಿದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಸಕರು ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ವಿಜಯಾನಂದ ಕಾಶಪ್ಪನವರ್ ಅವರನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿ, ಶುಭ ಹಾರೈಸಿದರು ಈ ವೇಳೆ . ಸಚಿವರಾದ ಜಮೀರ್ ಅಹಮದ್, ಬೈರತಿ ಸುರೇಶ್ ಸೇರಿ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಶಿವಶಂಕರಪ್ಪರನ್ನು ನೇಮಿಸಿ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಸಚಿವ ಸಂಪುಟ ದರ್ಜೆಯ ಸ್ನಾನಮಾನದೊಂದಿಗೆ ನೇಮಿಸಿ, ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಲಾಗಿತ್ತು.