ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ 2023-24ರ ಮಾರ್ಚ್ ವರೆಗೆ ಬಾಕಿ ಉಳಿಯುವ ವಿದ್ಯುತ್ ಮತ್ತು ನೀರಿನ ಬಿಲ್‌ಗಳ ಮೊತ್ತವನ್ನು ಭರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿವೆ ಉಚಿತ ನೀರು ಮತ್ತು ವಿದ್ಯುತ್ ಸರಬರಾಜು ಮಾಡುವ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಡಿ.15ರಂದು ಆದೇಶ ಹೊರಡಿಸಿತ್ತು. ಆದರೆ ಇದೀಗ ಮಾರ್ಚ್ ವರೆಗೆ ಬಾಕಿ ಉಳಿಯುವ ವಿದ್ಯುತ್ ಹಾಗೂ ನೀರಿನ ಬಿಲ್ ಗಳ ಮೊತ್ತವನ್ನು ಭರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರದ ನಡಾವಳಿ ದಿನಾಂಕ: 15-12- 2023 ರನ್ನು ಉಲ್ಲೇಖಿಸಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 2023-24 ರ ಮಾರ್ಚ್ ವರೆಗೆ ಬಾಕಿ ಉಳಿಯುವ ವಿದ್ಯುತ್ ಮತ್ತು ನೀರಿನ ಬಿಲ್‌ಗಳ ಮೊತ್ತವನ್ನು ಎಸ್.ಎಸ್.ಕೆ ಅಡಿ ಬಿಡುಗಡೆಯಾಗುವ ಶಾಲಾ ಅನುದಾನ ಬಳಸಿಕೊಂಡು ವಿದ್ಯುತ್ ಮತ್ತು ನೀರಿನ ಬಿಲ್‌ಗಳನ್ನು ಪಾವತಿಸುವಂತೆ ಸೂಚಿಸಲಾಗಿದೆ.