HomeEntertainment50 ದಿನದ ಸೆಲೆಬ್ರೇಶನ್ ಮಾಡಿದ 'ಕಾಟೇರ' ಚಿತ್ರತಂಡ

50 ದಿನದ ಸೆಲೆಬ್ರೇಶನ್ ಮಾಡಿದ ‘ಕಾಟೇರ’ ಚಿತ್ರತಂಡ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ಕೇವಲ ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗಿ ದೇಶದಲ್ಲೆಡೆ ಸಿನಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದ್ದು, ಇದೀಗ 50 ದಿನಗಳನ್ನು ಪೂರೈಸಿದೆ. ಚಿತ್ರತಂಡ ನಿನ್ನೆ 50 ದಿನದ ಸೆಲೆಬ್ರೇಶನ್ ಮಾಡಿದ್ದು, ನಟಿ ಆರಾಧನಾ ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಜಡೇಶ್ ಕೆ ಹಂಪಿ ಈ ಚಿತ್ರದ ಕಥೆ ಬರೆದಿದ್ದು, ತರುಣ್ ಸುಧೀರ್ ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ದರ್ಶನ್ ಗೆ ಜೋಡಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ಅಭಿನಯಿಸಿದ್ದು, ಶ್ರುತಿ, ಮಾಸ್ಟರ್ ರೋಹಿತ್, ಜಗಪತಿ ಬಾಬು, ಕುಮಾರ್ ಗೋವಿಂದ್, ವೈಜನಾಥ್ ಬಿರಾದರ್, ಪದ್ಮಾವಾಸಂತಿ, ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಮಾಸ್ತಿ ಅವರ ಸಂಭಾಷಣೆ, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular