![](https://kannadadunia.com/wp-content/uploads/2023/11/nimhans-hospital.jpg)
ಬೆಂಗಳೂರು : ಬೆಂಗಳೂರಿಗೆ ಕೇಂದ್ರ ಆರೋಗ್ಯ ಇಲಾಖೆ ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನಲ್ಲಿ 2 ನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಬೆಂಗಳೂರಿನ ಕ್ಯಾಲಸನಹಳ್ಳಿಯಲ್ಲಿ 40 ಎಕರೆ ಪ್ರದೇಶದಲ್ಲಿ 2 ನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಒಪ್ಪಿಗೆ ನೀಡಿದೆ. ಈ ಮೂಲಕ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು,
ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಅಸ್ಪತ್ರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ರೋಗಿಗಳು ಹೆಚ್ಚಾಗಿ ಬರುತ್ತಿರುವುದರಿಂದ ಕೇಂದ್ರ ಸರ್ಕಾರವು ಮತ್ತೊಂದು ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಹಸಿರು ನಿಶಾನೆ ನೀಡಿದೆ.