ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ವಿಧಾನಸಭೆ ಅಧಿವೇಶನ 1 ದಿನ ವಿಸ್ತರಣೆ ಮಾಡಲಾಗಿದೆ.
ಬಜೆಟ್ ಅಧಿವೇಶನ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಗಂಟಲು ನೋವಿನಿಂದ ಬಳಲುತ್ತಿದ್ದು, ವಿಶ್ರಾಂತಿ ಪಡೆಯಲಿದ್ದಾರೆ. ಈ ಹಿನ್ನೆಲೆ ವಿಧಾನಸಭೆ ಕಲಾಪ ಸೋಮವಾರ ಒಂದು ದಿನ ಮಾತ್ರ ಮುಂದೂಡಲಾಗಿದೆ. ಹಾಗೂ ಸೋಮವಾರ (ಫೆ.26) ಒಂದು ದಿನಕ್ಕೆ ವಿಧಾನಸಭೆ ಕಲಾಪ ನಡೆಸುವ ಮತ್ತು ಮಂಗಳವಾರ (ಫೆ.27) ರಾಜ್ಯಸಭಾ ಚುನಾವಣೆ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ. ಹೀಗಾಗಿ ಅಂದು ಕಲಾಪ ನಡೆಯುವುದಿಲ್ಲ. ಬಜೆಟ್ ಮಂಡನೆ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.