ಬೆಂಗಳೂರು : ಫೆ. 25 ರಂದು ಬೆಂಗಳೂರಿನಲ್ಲಿ ‘ಐಕ್ಯತಾ ಸಮಾವೇಶ’ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಫೆಬ್ರವರಿ 25ರ ಭಾನುವಾರ ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ “ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ” ನಡೆಯಲಿದೆ. ಸಂವಿಧಾನದ ಅರಿವು ಮೂಡಿಸುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.
ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿರುವ ಹಿನ್ನೆಲೆ ಅಮೃತ ಉತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದ್ದು, . ಫೆ. 25ರಂದು ಕೊನೆಯಾಗುತ್ತದೆ. ಈ ಹಿನ್ನೆಲೆ ಫೆ. 25 ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯಲಿದೆ ಎಂದರು. ಭಾರತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿರುವ ದೇಶ. ದೇಶದ ಜನತೆಗಾಗಿ ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ ಎಂದರು.