ಉತ್ತರ ಕನ್ನಡ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ನಡುರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ಹಲ್ಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿ ನಾಲ್ವರು ಮಹಿಳೆಯರು ಓರ್ವ ಮಹಿಳೆಯ ಬಟ್ಟೆ ಹರಿದು ಆಕೆ ಮೇಲೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಫೆಬ್ರವರಿ 5 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಸಾರ್ವಜನಿಕವಾಗಿ ಅವಮಾನ ಮಾಡುತ್ತಿದ್ದರೂ ಸಾರ್ವಜನಿಕರು ಮೂಕ ಪ್ರೇಕ್ಷಕರಂತೆ ನಿಂತು ನೋಡಿದ್ದು ದುರಂತವೇ ಸರಿ.
ಹಲ್ಲೆಗೊಳಗಾದ ಸ್ಥಿತಿಯಲ್ಲೇ ಮಹಿಳೆ ಯಲ್ಲಾಪುರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದಾರೆ, ಆದರೆ ಪೊಲೀಸರು ಮಾತ್ರ ದೂರು ಸ್ವೀಕರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಮಹಿಳೆ ಮೇಲೆ ಯಾಕೆ ಮಾಡಿದರು. ಘಟನೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ.
ಬೆಳಗಾವಿಯಲ್ಲಿ ಓರ್ವ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಭಾರಿ ಸುದ್ದಿಯಾಗಿತ್ತು.ಘಟನೆ ಬಗ್ಗೆ ಭಾರಿ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಇಂತಹ ಹಲವು ಘಟನೆಗಳು ನಡೆದಿದೆ.