ಬೆಂಗಳೂರು : ಬಿಜೆಪಿ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಮನ್ಸ್ ಜಾರಿ ಮಾಡಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ಜಾಹೀರಾತಿನಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂದು ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ. ಕಾಂಗ್ರೆಸ್ ಕರಪ್ಶನ್ ರೇಟ್ ಜಾಹೀರಾತು, 40 % ಕಮಿಷನ್ ಸೇರಿದಂತೆ ಹಲವು ಜಾಹೀರಾತುಗಳ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿ ಪಕ್ಷಕ್ಕೆ ಹಾನಿ ಮಾಡಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಮೂವರಿಗೆ ಮಾರ್ಚ್ 28 ಕ್ಕೆ ಕೋರ್ಟ್ ಗೆ ಹಾಜರಾಗುವಂತೆ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಸೂಚನೆ ನೀಡಿದೆ.
ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ದರ ಕಾರ್ಡ್ ನಿಗದಿಪಡಿಸಿದೆ ಎಂಬರ್ಥದಲ್ಲಿ ಮಾಧ್ಯಮಗಳಲ್ಲಿ ಜಾಹೀರಾತು ನೀಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಕೂಡ ಜಾರಿ ಮಾಡಿತ್ತು,