ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ನಾಗರಬಾವಿ ರಿಂಗ್ ರಸ್ತೆಯ ಮಲೆ ಮಹದೇಶ್ವರ ದೇಗುಲದ ಬಳಿ ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ಮುರಳಿ (40) ಎಂದು ಗುರುತಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಗೆ ಮೃತ ಮುರಳಿ ಶವವನ್ನು ಸ್ಥಳಾಂತರಿಸಲಾಗಿದೆ ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.