ಬಳ್ಳಾರಿ : 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ.2.5 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್ನಲ್ಲಿ ಸಲ್ಲಿಸಲು ಫೆ.29 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.