ಬೆಂಗಳೂರಿನಲ್ಲಿ : ಬೆಂಗಳೂರಿನಲ್ಲಿ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ವೀವರ್ಸ್ ಕಾಲೊನಿಯಲ್ಲಿ ನಡೆದಿದೆ.
ಮಂಜುನಾಥ್ ಅಲಿಯಾಸ್ ಮೆಂಟಲ್ ಮಂಜ ಎಂಬಾತನನ್ನು ಶಶಿಕುಮಾರ್ ಹಾಗೂ ಆತನ ಗ್ಯಾಂಗ್ ಚಾಕುವಿನಿಂದ ಚುಚ್ಚಿ ಎಸ್ಕೇಪ್ ಆಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಂಜನನ್ನು ಅನೇಕಲ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆತ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.