ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ ದೋಷಿಯಾಗಿರುವ ರಮೇಶ್ ಚಂದ್ನಾ ಮಾರ್ಚ್ 5 ರಂದು ತನ್ನ ಸೋದರಳಿಯನ ಮದುವೆಯಲ್ಲಿ ಭಾಗಿಯಾಗಲು ಗುಜರಾತ್ ಹೈಕೋರ್ಟ್ 10 ದಿನಗಳ ಪೆರೋಲ್ ನೀಡಿದೆ.
ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಅವರು ಈ ಆದೇಶವನ್ನು ಹೊರಡಿಸಿದ್ದು, “ಅಪರಾಧಿ ತನ್ನ ಸಹೋದರಿಯ ಮಗನ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದಾರೆ ಎಂಬ ಆಧಾರದ ಮೇಲೆ ಪೆರೋಲ್ ಕೋರಲಾಗಿದೆ. ಅವರ ಅರ್ಜಿಯನ್ನು ಪರಿಗಣಿಸಿದ ನಂತರ, ಆರೋಪಿಗೆ 10 ದಿನಗಳ ಪೆರೋಲ್ ನೀಡಲಾಗಿದೆ.
ಬಿಲ್ಕಿಸ್ ಬಾನು ಪ್ರಕರಣದಲ್ಲಿ ಪೆರೋಲ್ ಪಡೆದ ರಮೇಶ್ ಚಂದ್ನಾ ಎರಡನೇ ಅಪರಾಧಿ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಪ್ರಕರಣದ ಎಲ್ಲಾ 11 ಅಪರಾಧಿಗಳು ಜನವರಿ 21 ರಂದು ಗೋಧ್ರಾ ನಗರದ ಜೈಲಿಗೆ ಶರಣಾಗಿದ್ದರು.
2002ರ ಗೋಧ್ರಾ ಹತ್ಯಾಕಾಂಡ ಪ್ರಕರಣದ ಎಲ್ಲ ಅಪರಾಧಿಗಳನ್ನು ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ದೋಷಿಗಳೆಂದು ಘೋಷಿಸಿತ್ತು.