ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ದೆಹಲಿ, ಹರಿಯಾಣ ಮತ್ತು ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ತಮ್ಮ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿವೆ. ಜಂಟಿ ಹೇಳಿಕೆಯಲ್ಲಿ, ಎರಡೂ ಪಕ್ಷಗಳು ಪಂಜಾಬ್ ನಲ್ಲಿ ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಪರಸ್ಪರ ನಿರ್ಧರಿಸಿವೆ ಎಂದು ತಿಳಿಸಿವೆ.
ದೆಹಲಿಯಲ್ಲಿ ಎಎಪಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ತಿಳಿಸಿದ್ದಾರೆ.
ಗುಜರಾತ್ನಲ್ಲಿ ಕಾಂಗ್ರೆಸ್ 24 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಎಎಪಿ 2 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಹರಿಯಾಣದಲ್ಲಿ 10 ಸ್ಥಾನಗಳಲ್ಲಿ ಕಾಂಗ್ರೆಸ್ 9 ಸ್ಥಾನಗಳನ್ನು, ಎಎಪಿ 1 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.