ಸರ್ಕಾರಿ ಶಾಲೆಯಲ್ಲಿ ನಮಾಜ್ ಮಾಡುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸಿದ ಆರೋಪದ ಮೇಲೆ ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದ್ದಾರೆ.
ಶಿಕ್ಷಕರು ನಿಷೇಧಿತ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ತಮ್ಮ ಇಚ್ಛೆಗೆ ವಿರುದ್ಧವಾಗಿ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಅಮಾನತು ಆದೇಶ ಹೊರಡಿಸಲಾಗಿದೆ.
ಕೋಟಾದ ಸಂಗೋಡ್-ಕನ್ವಾಸ್ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ಫೆಬ್ರವರಿ 20 ರಂದು ಪತ್ರದ ಮೂಲಕ ಶಿಕ್ಷಣ ಸಚಿವರಿಗೆ ದೂರು ನೀಡಿದ್ದರು. ದೂರಿನ ಪ್ರಕಾರ, ಖಜುರಿ ಓಡ್ಪುರ್ ಗ್ರಾಮದ ಶಾಲೆಯ ಮೂವರು ಶಿಕ್ಷಕರಾದ ಶಬಾನಾ, ಫಿರೋಜ್ ಮತ್ತು ಮಿರ್ಜಾ ಮುಜಾಹಿದ್ ಅವರು ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ.
.