ಶಿವಮೊಗ್ಗ : ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿಯಾಗಿ 5 ತಿಂಗಳ ಮಗುವಿನ ಸ್ಥಿತಿ ಚಿಂತಾಜನಕವಾದ ಘಟನೆ ಶಿವಮೊಗ್ಗದ ಸಿದ್ದಿಗಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಸ್ತೂರಿ ಎಂದು ಗುರುತಿಸಲಾಗಿದೆ. ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದ್ದು, ಗಂಡನ ಮನೆಯವರು ಮಹಿಳೆ ಹಾಗೂ ಮಗುವಿಗೆ ವಿಷ ಕುಡಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಕಸ್ತೂರಿ ಪತಿ ಮಂಜುನಾಥ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನನ್ನ ಮಗಳ ಸಾವಿಗೆ ಗಂಡನ ಮನೆಯವರೇ ಕಾರಣ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಸ್ತೂರಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.