ಬೆಂಗಳೂರು : ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಒಟಿಎಸ್ ಪಾವತಿಸಲು ಅವಕಾಶ ನೀಡಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರು ʼಒಂದು ಬಾರಿ ತೀರುವಳಿʼ (ಒಟಿಎಸ್) ಅನ್ನು ಆನ್ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರ ಫೆಬ್ರವರಿ 22ರಂದು ಒಟಿಎಸ್ ಯೋಜನೆಯ ಅಧಿಸೂಚನೆ ಹೊರಡಿಸಿದೆ. ಅದರಂತೆ ಆನ್ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿಸುವ ಸಾಫ್ಟ್ವೇರ್ನಲ್ಲಿ (ವೆಬ್ಸೈಟ್: http://bbmptax.karnataka.gov.in) ಒಟಿಎಸ್ ಪಾವತಿಸಬಹುದಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.