HomeKarnatakaBIG NEWS : ಗ್ಯಾರಂಟಿ ಯೋಜನೆಗಳಿಗಾಗಿ ಈ ಬಜೆಟ್ ನಲ್ಲಿ 50 ಸಾವಿರ ಕೊಟಿ ಮೀಸಲು...

BIG NEWS : ಗ್ಯಾರಂಟಿ ಯೋಜನೆಗಳಿಗಾಗಿ ಈ ಬಜೆಟ್ ನಲ್ಲಿ 50 ಸಾವಿರ ಕೊಟಿ ಮೀಸಲು : ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ‌ : ಗ್ಯಾರಂಟಿ ಯೋಜನೆಗಳಿಗಾಗಿ ಈ ಬಜೆಟ್ ನಲ್ಲಿ 50 ಸಾವಿರ ಕೊಟಿ ಮೀಸಲು ಇಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಚುನಾವಣಾ ಪೂರ್ವ ಸಮಿತಿಯನ್ನು ರಚಿಸಿ, ಗ್ಯಾರಂಟಿ ಕಾರ್ಡುಗಳನ್ನು ಮನೆ ಮನೆಗಳಿಗೆ ತಲುಪಿಸಿದಂತೆ ಸರ್ಕಾರ ರಚನೆಯಾದ ತಕ್ಷಣ ಯೋಜನೆಗಳನ್ನು ಜಾರಿ ಮಾಡಿ ನಡೆದಂತೆ ನುಡಿದಿದ್ದೇವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಣ್ಣು ಕುಟುಂಬದ ಕಣ್ಣು. ಅವರ ಕುಟುಂದಲ್ಲಿ ಭಾಗ್ಯೋದಯವಾಗಲೆಂದು ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿಯಲ್ಲಿ ಚಾಲನೆ ನೀಡಿ, ಇದುವರೆಗೆ 1 ಕೋಟಿ 10 ಲಕ್ಷ, ಮಹಿಳೆಯರಿಗೆ  ರೂ.2000 ಭತ್ಯೆ ನೀಡಲಾಗಿದ್ದು ರಾಷ್ಟ್ರದಲ್ಲೆ ಇದೊಂದು ಇತಿಹಾಸ.

ಗೃಹಜ್ಯೋತಿ ಯೋಜನೆಯಡಿ ಇದುವರೆಗೆ 1.5 ಕೋಟಿ ಜನರಿಗೆ ಉಚಿತ 200 ಯುನಿಟ್ ವಿದ್ಯುತ್ ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿ 5 ಕೆ ಜಿ ಜೊತೆ ಇನ್ನುಳಿದ ಐದು ಕೆಜಿ ಅಕ್ಕಿ ಬದಲು ಪ್ರತಿ ಸದಸ್ಯರಿಗೆ ಒಂದು ಕೆಜಿಗೆ ರೂ.34 ರಂತೆ ನೀಡಲಾಗುತ್ತಿದೆ.

ಪ್ರಸ್ತುತ ಬೆಲೆ ಏರಿಕೆ ಸಂಕಷ್ಟದಲ್ಲಿ ಸರ್ಕಾರ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದೆ. ಹಾಗೂ ಪ್ರಸ್ತುತ ಹೊಸದಾಗಿ 1000 ಬಸ್ ಖರೀದಿ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈ ಬಜೆಟ್ ನಲ್ಲಿ 50 ಸಾವಿರ ಕೊಟಿ ಮೀಸಲು ಇಡಲಾಗಿದೆ.

ಶಿಕ್ಷಣದಲ್ಲಿ ಗುಣಮಟ್ಟ ತರಲು, ರೈತರು, ಕಾರ್ಮಿಕರು, ಶಿಕ್ಷಕರು ಹಾಗೂ ಎಲ್ಲ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರದ ಹಂತದಲ್ಲಿ ಸಮಿತಿ ರಚಿಸಿ  ಕೋಟಿಗೂ ಹೆಚ್ಚು ಬಂಡವಾಳ ಹಾಕಿ ಕೆಪಿಎಸ್, ಸಿಎಸ್ ಆರ್ ಮಾದರಿ ಶಾಲೆಗಳನ್ನು ತೆರೆಯುವ ಯೋಜನೆ ಮೂಲಕ ದೊಡ್ಡ ನಗರದಲ್ಲಿ ದೊರೆಯುವಂತಹ ಶಿಕ್ಷಣ ಹಳ್ಳಿಮಕ್ಕಳಿಗೂ ಸಿಗವಂತಹ ಕಾರ್ಯಕ್ರಮ ರೂಪಿಸಿದ್ದೇವೆ.

ಯುವನಿಧಿ ಯೋಜನೆ ಮೂಲಕ ಪದವಿ ಪೂರ್ಣಗೊಳಿಸಿದವರಿಗೆ ರೂ.3 ಸಾವಿರ ಹಾಗೂ ಡಿಪ್ಲೊಮಾದಾರರಿಗೆ ರೂ.1500 ನೀಡುವ ಮೂಲಕ ಯುವಜನರಿಗೆ ಆಶಾಕಿರಣವಾಗಿದ್ದು ಐದು ಗ್ಯಾರಂಟಿ ಯೋಜನೆಗಳು ಜನರಲ್ಲಿ ಶಕ್ತಿ ತುಂಬಿದೆ ಎಂದರು.

 ಮುಂದಿನ ದಿನದಲ್ಲಿ ಎಲ್ಲ ವರ್ಗದವರಿಗೆ 35 ರ್ಷದ ಮಿತಿಯೊಳಗೆ ಅರಣ್ಯ ಹಕ್ಕು ನೀಡಲು ಸರ್ಕಾರ ಬದ್ದವಾಗಿದೆ. ಅಧಿಕಾರಿಗಳು ಬಡವರನ್ನು ಒಕ್ಕಲೆಬ್ಬಿಸಬಾರದು. ಶರಾವತಿ ಸಂತ್ರಸ್ತರ ರಕ್ಷಣೆ ಬಗ್ಗೆ ನಮ್ಮ ಬದ್ದತೆ ಇದ್ದು ಬಡತನ ನಿರ್ಮೂಲನೆ ನಮ್ಮ ಯುದ್ದವಾಗಿದೆ.

ಉಳುವವನೆ ಭೂಮಿ ಒಡೆಯ ಹಕ್ಕು ವಿಚಾರ ನಿರ್ವಹಿಸಲಾಗುತ್ತಿದೆ. ಜಿಲ್ಲಾ ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ.ಸೌಲಭ್ಯಗಳನ್ನು ನೀಡಲು ಮನೆ ಬಾಗಿಲಿಗೆ ನಮ್ಮ ಸರ್ಕಾರ ಬಂದಿದೆ. ಸದುಪಯೋಗ ಪಡೆಯಿರಿ. ಎಲ್ಲ ವರ್ಗಗಳಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದಿದೆ ಎಂದ ಅವರು ಇದೇ ಸಂದರ್ಭದಲ್ಲಿ ಅವರು  ಅಲ್ಲಮಪ್ರಭು ವಚನಗಳನ್ನು ಸ್ಮರಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular