ಅರಸೀಕೆರೆ : ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ದೇವೇಗೌಡರು ಈಗ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅರಸೀಕೆರೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿದರು. ಬಿಜೆಪಿ-ಜೆಡಿಎಸ್ ಒಟ್ಟಾಗಿ ವಿಧಾನ ಪರಿಷತ್ ಗೆ ಒಂದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ನಮ್ಮ ಜನ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ನಮ್ಮ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಭರ್ಜರಿಯಾಗಿ ಗೆಲ್ಲಿಸಿದರು. ಬರಲಿರುವ ಲೋಕಸಭಾ ಚುನಾವಣೆಯಲ್ಲೂ ಅವರ ದೋಸ್ತಿಗೆ ಇದೇ ಗತಿ ಆಗಲಿದೆ ಎಂದರು.
ಒಂದು ಕಡೆ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಬಿಜೆಪಿಯವರು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರು ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ.