HomeKarnatakaಬಿಜೆಪಿ ಟಿಕೆಟ್ ಸಿಗದಿದ್ದರೆ ಮತ್ತೆ ಪಕ್ಷೇತರರಾಗಿ ಸ್ಪರ್ಧೆ: ಸಂಸದೆ ಸುಮಲತಾ ಅಂಬರೀಶ್ ಇಂದು ಮಹತ್ವದ ಸಭೆ

ಬಿಜೆಪಿ ಟಿಕೆಟ್ ಸಿಗದಿದ್ದರೆ ಮತ್ತೆ ಪಕ್ಷೇತರರಾಗಿ ಸ್ಪರ್ಧೆ: ಸಂಸದೆ ಸುಮಲತಾ ಅಂಬರೀಶ್ ಇಂದು ಮಹತ್ವದ ಸಭೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಸಂಸದೆ ಸುಮಲತಾ ಅಂಬರೀಶ್ ಫೆಬ್ರವರಿ 25ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ಕರೆದಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮುಖಂಡರು, ಬೆಂಬಲಿಗರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸುಮಲತಾ ಅಂಬರೀಶ್ ಅವರು ಇನ್ನೂ ಅಧಿಕೃತವಾಗಿ ಬಿಜೆಪಿಗೆ ಸೇರಿಲ್ಲ. ಮಂಡ್ಯ ಕ್ಷೇತ್ರದಿಂದ ಟಿಕೆಟ್ ಖಚಿತಪಡಿಸಿಕೊಂಡು ಅವರು ಬಿಜೆಪಿ ಸೇರುವ ಬಗ್ಗೆ ಇಲ್ಲವೇ ಟಿಕೆಟ್ ಕೈತಪ್ಪಿದಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

ಇಂದಿನ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಅವರು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಬಿಜೆಪಿ –ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ. ಈ ಬಗ್ಗೆಯೂ ಚರ್ಚೆ ನಡೆಸಿ ಸಂಸದೆ ಸುಮಲತಾ ಅಂಬರೀಶ್ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular