HomeKarnatakaBIG NEWS: ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

BIG NEWS: ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವ್ಯಕ್ತಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಈ ಘಟನೆ ನಡೆದಿದೆ.

ಯಲಹಂಕದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ವ್ಯಕ್ತಿಯೋರ್ವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಿಗ್ಗೆಯಷ್ಟೇ ಬೆಂಗಳೂರು ನಗರ ಜಿಲೆಯ ಆನೇಕಲ್ ಬಳಿ ನೀಲಗಿರಿ ತೋಪಿನಲ್ಲಿ ತಮಿಳುನಾಡಿ ಬಿಟೆಕ್ ವಿದ್ಯಾರ್ಥಿಯೋರ್ವನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಇಂತದ್ದೇ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular