ಬಿಹಾರದ ಕೈಮೂರ್ ಜಿಲ್ಲೆಯ ದೇವಕಾಳಿ ಗ್ರಾಮದ ಬಳಿ ಭಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 2ರ ದೇವಕಾಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಸಸಾರಾಮ್ ನಿಂದ ವಾರಣಾಸಿಗೆ ವೇಗವಾಗಿ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ.ನಂತರ ಮೋಟಾರ್ ಸೈಕಲ್ ಮತ್ತು ಕಾರು ವಿರುದ್ಧ ಪಥಕ್ಕೆ ತಿರುಗಿತು ಮತ್ತು ಟ್ರಕ್ ಅವರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕಾರಿನಲ್ಲಿದ್ದ ಎಲ್ಲಾ ಎಂಟು ಪ್ರಯಾಣಿಕರು ಮತ್ತು ವಾಹನ ಚಾಲಕ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
https://twitter.com/ANI/status/1761820481462681758?ref_src=twsrc%5Etfw%7Ctwcamp%5Etweetembed%7Ctwterm%5E1761820481462681758%7Ctwgr%5E400171a0a230de8a613b0e4a3d92619a3803a1bb%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalaunch%3Dtrue