ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.
2023 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.
ಈ ಕೆಲಸ ಮಾಡದಿದ್ರೆ ಬರಲ್ಲ ಹಣ..!
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯುವನಿಧಿಯಲ್ಲಿ ಹೆಸರು ನೋಂದಾನಿಸಿಕೊಂಡು ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಉದ್ಯೋಗ ಇಲ್ಲದ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರೆಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿ ಅಲ್ಲ ಎಂಬ ಸ್ವಯಂ ಘೋಷಣೆ ಮಾಡಬೇಕು. ಫೆಬ್ರವರಿ ತಿಂಗಳ ಘೋಷಣೆಯನ್ನು ಫೆ. 29 ರಂದು ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.