HomeIndiaರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ GST ವಿನಾಯಿತಿ |RERA GST Exemption

ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ GST ವಿನಾಯಿತಿ |RERA GST Exemption

ನವದೆಹಲಿ: ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ(ರೇರಾ) ಜಿಎಸ್​ಟಿ ವಿನಾಯಿತಿ ನೀಡಲಾಗಿದೆ. ಜಿ.ಎಸ್.ಟಿ. ಮಂಡಳಿ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿ, ರೇರಾಗಳಿಗೆ ಆಯಾ ರಾಜ್ಯ ಸರ್ಕಾರಗಳು ಹಣ ನೀಡುತ್ತವೆ. ಹೀಗಾಗಿ ಪ್ರಾಧಿಕಾರಗಳಿಗೆ ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರಗಳಿಗೆ ತೆರಿಗೆ ವಿಧಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಂಚಾಯಿತಿಗಳ ಅಧಿಕಾರ ಮತ್ತು ಹೊಣೆಗಾರಿಕೆ ವಿಚಾರದಲ್ಲಿ ಸಂವಿಧಾನದ 243ಜಿ ಪರಿಚ್ಚೇದದ ವ್ಯಾಪ್ತಿಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಬರುತ್ತದೆ. ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಪಾರದರ್ಶಕತೆ ಗ್ರಾಹಕರ ಹಿತರಕ್ಷಣೆ ವಿವಾದಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯಗಳಲ್ಲಿ ರೇರಾ ಸಂಸ್ಥೆ ಸ್ಥಾಪನೆ ಮಾಡಲಾಗಿದೆ. ರೇರಾ ಕಾರ್ಯ ವಿಧಾನದ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದ ನಂತರ ಜಿ.ಎಸ್.ಟಿ. ಅನ್ವಯವಾಗುವುದಿಲ್ಲ ಎಂದು ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular