ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾಗಿದೆ.
ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಬಟ್ಟೆಗಳು ಸುಟ್ಟು ಕರಕಲಾಗಿವೆ.
ಅಗ್ನಿ ಅವಘಡದ ಕುರಿತು ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ.