ಬೆಂಗಳೂರು : ರೈತನನ್ನು ಅವಮಾನ ಮಾಡಿದ್ದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೆಟ್ರೋ ಸೆಕ್ಯೂರಿಟಿ ಮೇಲ್ವಿಚಾರಕನನ್ನು ವಜಾಗೊಳಿಸಿ ಬಿಎಂಆರ್ ಸಿಎಲ್ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಟ್ಟೆ ಕ್ಲೀನ್ ಇಲ್ಲ ಎಂದು ಸಿಬ್ಬಂದಿ ರೈತನನ್ನು ಮೆಟ್ರೋದ ಒಳಗಡೆ ಬಿಡಲಿಲ್ಲ. ರೈತರೊಬ್ಬರು ಮೆಟ್ರೋ ನಿಲ್ದಾಣಕ್ಕೆ ತಮ್ಮ ಲಗೇಜು ಸಮೇತ ಬಂದಿದ್ದು, ರೈತ ಹಳೆ ಬಟ್ಟೆ ಹಾಕಿದ್ದಾನೆ ಎಂಬ ಕಾರಣಕ್ಕೆ ರೈತನನ್ನು ಗಂಟೆಗಟ್ಟಲೇ ನಿಲ್ಲಿಸಿ ಒಳಗೆ ಬಿಡದೇ ಸತಾಯಿಸಿದ ಅಮಾನವೀಯ ಘಟನೆ ವರದಿಯಾಗಿತ್ತು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೆಟ್ರೋ ಸೆಕ್ಯೂರಿಟಿ ಮೇಲ್ವಿಚಾರಕನನ್ನು ವಜಾಗೊಳಿಸಿ ಬಿಎಂಆರ್ ಸಿಎಲ್ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.