ಬೆಂಗಳೂರು : ಕ್ಯಾನ್ಸರ್ ತಪಾಸಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ.
ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ – ಕೇರ್ ಕಿಮೋಥೆರಪಿ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ತಪಾಸಣೆಗೂ ವಿಶೇಷ ಕಾರ್ಯಕ್ರಮಕ್ಕೆ ಯೋಜನೆ ರೂಪಿಸುತ್ತಿದ್ದೇವೆ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮ್ಯಾಮೋಗ್ರಫಿ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಗೃಹ ಆರೋಗ್ಯ ಯೋಜನೆಯಡಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣೆ ಮತ್ತು ಔಷಧ ಒದಗಿಸಲು ಕ್ರಮವಹಿಸಿದ್ದೇವೆ ಹೇಳಿದ್ದಾರೆ.