![](https://kannadadunia.com/wp-content/uploads/2024/02/Polio.jpg)
ಬೆಂಗಳೂರು : ಮಾರ್ಚ್ 3ರಂದು ರಾಜ್ಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಿಗದಿತ ಬೂತ್, ಅಂಗನವಾಡಿ ಮುಂತಾದ ಸ್ಥಳಗಳಲ್ಲಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ, ನಗರ ಮಟ್ಟಗಳಲ್ಲೂ ಪೋಲಿಯೊ ಲಸಿಕೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಂತರದ ಮೂರು ದಿನ ತಂಡಗಳು ಮನೆ ಮನೆಗೆ ತೆರಳಿ ಲಸಿಕೆ ನೀಡಲಿವೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ.