![](https://kannadadunia.com/wp-content/uploads/2022/10/school-room.jpg)
ಬೆಂಗಳೂರು : ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ʻ ಪ್ರತಿಜ್ಞಾ ವಿಧಿ ಸ್ವೀಕಾರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಫೆಬ್ರವರಿ 28, 2024 ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಬೆಳಿಗ್ಗೆ 11:00 ಗಂಟೆಗೆ ರಾಜ್ಯದ ಎಲ್ಲಾ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರತಿಜ್ಞಾ ವಿಧಿಯನ್ನು ಎಲ್ಲಾ ವಿದ್ಯಾರ್ಥಿಗಳು ಸ್ವೀಕರಿಸುವಂತೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
![](https://kannadadunia.com/wp-content/uploads/2024/02/school-7.jpg)