BIG NEWS: ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ಮತ ಎಂದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದೆ. ಈ ನಡುವೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದು, ಅನುದಾನ ಕೊಟ್ಟವರಿಗೆ ನನ್ನ ಮೊದಲ ಪ್ರಾಶಸ್ತ್ಯದ ಮತ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ನಾನು ಯಾವ ಲೀಡರ್ ಗಳನ್ನೂ ಭೇಟಿಯಾಗಿಲ್ಲ. ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುತ್ತೇನೆ. ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಗಟ್ಟಿಯಾಗಿ ಪ್ರಾಮಿಸ್ ಮಾಡ್ತಾರೆ ಅವರಿಗೆ ನನ್ನ ಮತ. ಏನಾದ್ರೂ ಆಗಲಿ ಆತ್ಮಸಾಕ್ಷಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದಾರೆ.

ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ವೋಟ್. ಕಳೆದ 6 ವರ್ಷಗಳಿಂದ ಇದೆಲ್ಲವನ್ನೂ ನೋಡುತ್ತಿದ್ದೇನೆ. ಎಲ್ಲರೂ ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಹೊರತು ಯಾರೊಬ್ಬರೂ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ. ಹಾಗಾಗಿ ಈ ಬಾರಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರೇ ಆಗಲಿ ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ಕೊಡುತ್ತಾರೋ ಅವರಿಗೆ ನನ್ನ ವೋಟ್ ಇದರಲ್ಲಿ ಮುಚ್ಚುಮರೆ ಇಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read