ಬೆಂಗಳೂರು : ರಾಜ್ಯ ಸರ್ಕಾರವು ಯುವನಿಧಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಫೆಬ್ರವರಿ 2024ರಲ್ಲಿ ಪ್ರಯೋಜನ ಪಡೆಯಲು ಅಭ್ಯರ್ಥಿಗಳು 29.02.2024ರೊಳಗೆ ತಾನು ನಿರುದ್ಯೋಗಿ ಎಂದು ಕಡ್ಡಾಯವಾಗಿ ಸ್ವಯಂ ಘೋಷಣೆ ಮಾಡಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ʼಯುವನಿಧಿʼ ಅಡಿಯಲ್ಲಿ ಈಗಾಗಲೇ ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡ ಪದವೀಧರರು/ ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾದಾರರು ಅವರ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.
ಸೂಚಿತ ಸಮಯದೊಳಗೆ ಮಾಸಿಕ ಸ್ವಯಂ ಘೋಷಣೆ ಮಾಡದೇ ಹೋದಲ್ಲಿ ʼಯುವನಿಧಿʼ ನೇರ ನಗದು ವರ್ಗಾವಣೆ ಸೌಲಭ್ಯದಿಂದ ಅನರ್ಹಗೊಳಿಸಲಾಗುವುದು ಎಂದು ತಿಳಿಸಲಾಗಿದೆ.