HomeKarnatakaBIG NEWS: ರಾಜ್ಯಸಭಾ ಚುನಾವಣೆ: ಮತದಾನದ ಬಗ್ಗೆ ಬಹಿರಂಗ ಪಡಿಸಲ್ಲ ಎಂದ ಜನಾರ್ಧನ ರೆಡ್ಡಿ

BIG NEWS: ರಾಜ್ಯಸಭಾ ಚುನಾವಣೆ: ಮತದಾನದ ಬಗ್ಗೆ ಬಹಿರಂಗ ಪಡಿಸಲ್ಲ ಎಂದ ಜನಾರ್ಧನ ರೆಡ್ಡಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಚುರುಕುಗೊಂಡಿದ್ದು, ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

ಈ ನಡುವೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಕಾಂಗ್ರೆಸ್ ಪರ ಮತಹಾಕುವ ಸಾಧ್ಯತೆ ಹಿನ್ನೆಲೆಯಲ್ಲಿ ಬಿಜೆಪಿ ವಿಪ್ ಜಾರಿ ಮಾಡಿದೆ.

ಈ ಮಧ್ಯೆ ಕೆಆರ್ ಪಿಪಿ ಶಾಸಕ ಜನಾರ್ಧನ ರೆಡ್ಡಿ ನಡೆ ಕೂಡ ತೀವ್ರ ಕುತೂಹಲ ಮೂಡಿಸಿದೆ. ಜನಾರ್ಧನ ರೆಡ್ಡಿ ಯಾವ ಅಭ್ಯರ್ಥಿ ಪರ ಮತ ಚಲಾಯಿಸಿದ್ದಾರೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತದಾನದ ಬಳಿಕ ಮಾತನಾಡಿದ ಜನಾರ್ಧನ ರೆಡ್ಡಿ, ನಾನು ಯಾರಿಗೆ ಮತ ಹಾಕಿದ್ದೇನೆ ಎಂದು ಬಹಿರಂಗಪಡಿಸಲ್ಲ. ಕ್ಷೇತ್ರದ ಮತದಾರರು ಹೇಳಿದ ವ್ಯಕ್ತಿಗೆ ಮತ ಹಾಕಿದ್ದೇನೆ ಎಂದಿದ್ದಾರೆ.

ಸಿಎಂ, ಡಿಸಿಎಂ ಸೇರಿದಂತೆ ಹಲವರು ನನ್ನ ಸಂಪರ್ಕಿಸಿದ್ದರು. ಆತ್ಮಸಾಕ್ಷಿಗೆ ಅನುಗುಣವಾಗಿ ನಾನು ಮತ ಹಾಕಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular