ಬೆಂಗಳೂರು : ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಶಾಸಕ ಸ್ಥಾನಕ್ಕೆ ST ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಪರ ಮತ ಚಲಾಯಿಸಿದ್ದು, ಇಂದು ಬಿಜೆಪಿ ಮೋರ್ಚಾ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಹಿನ್ನೆಲೆ ಶಾಸಕರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದರ ನಡುವೆ ಇಂದು ಸಂಜೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗೂ ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕೂಡ ಇಂದು ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಬಿಜೆಪಿಗೆ ಇಬ್ಬರು ಶಾಸಕರು ಬಿಗ್ ಶಾಕ್ ನೀಡಿದ್ದಾರೆ.
ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿಪ್ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ಗೆ ಮತಹಾಕುವ ಮೂಲಕ ಅಡ್ಡ ಮತದಾನ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಶಾಸಕ ಶಿವರಾಮ್ ಹೆಬ್ಬಾರ್ ನಡೆ ಕೂಡ ಕುತೂಹಲ ಮೂಡಿಸಿದೆ.ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಅಡ್ಡ ಮತದಾನ ಮಾಡುವ ಭೀತಿ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಮ್ಮೆ ಶಾಸಕರಿಗೆ ವಿಪ್ ಜಾರಿ ಮಾಡಿದೆ. ವಿಧಾನಸೌಧದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ಕೊಠಡಿಗೆ ಸಚೇತಕ ದೊಡ್ಡನಗೌಡ ಪಾಟೀಲ್ ವಿಪ್ ಅಂಟಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೊಡ್ದನಗೌಡ ಪಾಟೀಲ್, ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.