ಬೆಂಗಳೂರು : ರಾಜ್ಯಸಭೆ ಚುನಾವಣೆ ಗೆಲ್ಲಲು ಜೆಡಿಎಸ್ ಗೆ 45 ಮತಗಳ ಅಗತ್ಯವಿದೆ. ಹೀಗಾಗಿ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಧಾನಸೌಧದ ಮುಂಭಾಗ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ. ಅಷ್ಟು ಸಂಖ್ಯೆಯ ಮತಗಳು ಅವರ ಬಳಿ ಇದೆಯೇ? ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ನಮ್ಮವರಿಗೆ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಈ ಬಗ್ಗೆ ಯಾವ ಅನುಮಾನವಿಲ್ಲ ಎಂದರು.