alex Certify ‘ಹೈಡ್ & ಸೀಕ್’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೈಡ್ & ಸೀಕ್’ ಚಿತ್ರದ ಟ್ರೈಲರ್ ರಿಲೀಸ್

ಅನೂಪ್ ರೇವಣ್ಣ ಮತ್ತು ಧನ್ಯ ರಾಮ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಹೈಡ್ ಅಂಡ್ ಸೀಕ್’ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸುವಂತೆ ಮಾಡಿದೆ. ಈ ಟ್ರೈಲರ್ ಗಮನಿಸಿದರೆ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಎಂದು ಹೇಳಬಹುದಾಗಿದೆ.

ಪುನೀತ್ ನಾಗರಾಜ್ ನಿರ್ದೇಶನದ ಈ ಸಿನಿಮಾದಲ್ಲಿ ಅನುಪ್ ರೇವಣ್ಣ ಮತ್ತು ಧನ್ಯ ರಾಮ್ ಕುಮಾರ್ ಮುಖ್ಯ ಭೂಮಿಕೆಯಲ್ಲಿದ್ದು, ಮೈತ್ರಿ ಜಗ್ಗಿ, ಸೂರಜ್, ಬಾಲರಾಜ್ವಾಡಿ, ಕೃಷ್ಣ ಹೆಬ್ಬಾಳೆ, ರಾಜೇಶ್ ನಟರಂಗ, ಅರವಿಂದ ರಾವ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಸ್ಯಾಂಡಿ ಅಡ್ಡಂಕಿ ಸಂಗೀತ ಸಂಯೋಜನೆ ನೀಡಿದ್ದು, ಮಧು ಸಂಕಲನವಿದೆ. ಸುನೇರಿ ಆರ್ಟ್ ಕ್ರಿಯೇಷನ್ ಬ್ಯಾನರ್ ನಲ್ಲಿ ವಸಂತ್ ಎಂ ಕುಲಕರ್ಣಿ ಹಾಗೂ ನಿರ್ದೇಶಕ ಪುನೀತ್ ನಾಗರಾಜ್ ಬಂಡವಾಳ ಹೂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...