ವಿಜಯಪುರ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.
ಘಾಳಪೂಜೆ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಘಟನೆಯಲ್ಲಿ ಸಾಗರ್, ಸಮರ್ಥ್. ಮಲ್ಲಿಕಾರ್ಜುನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಸತಿ ಶಾಲೆ ಉದ್ಘಾಟನೆಯಾಗಿ 6 ತಿಂಗಳಲ್ಲಿ ಈ ಅವಘಡ ನಡೆದಿದೆ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.