ಬೆಂಗಳೂರು : ಗೆಲುವಿನ ನಿರೀಕ್ಷೆಯಲ್ಲಿದ್ದ ಮೈತ್ರಿ ಅಭ್ಯರ್ಥಿಗೆ ಬಿಗ್ ಶಾಕ್ ಎದುರಾಗಿದ್ದು, ಕುಪೇಂದ್ರ ರೆಡ್ಡಿಗೆ ಮತ್ತೆ ಸೋಲಾಗಿದೆ.
ರಾಜ್ಯಸಭೆ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಗೆಲುವಿನ ನಿರೀಕ್ಷೆಯಲ್ಲಿದ್ದ ದೋಸ್ತಿ ಅಭ್ಯರ್ಥಿಗೆ ಬಿಗ್ ಶಾಕ್ ಎದುರಾಗಿದ್ದು, ಕುಪೇಂದ್ರ ರೆಡ್ಡಿಗೆ ಮತ್ತೆ ಸೋಲಾಗಿದೆ. ಕುಪೇಂದ್ರ ರೆಡ್ಡಿ ಕೇವಲ 35 ಮತಗಳನ್ನು ಮಾತ್ರ ಪಡೆದಿದ್ದಾರೆ.
ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮತದಾನ ನಡೆದಿದ್ದು, ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅಜಯ್ ಮಾಕೇನ್, ನಾಸೀರ್ ಹುಸೇನ್ ತಲಾ 47 ಮತ್ತು ಜಿ ಸಿ ಚಂದ್ರಶೇಖರ್ 45 ಮತಗಳನ್ನು ಪಡೆದು ಆಯ್ಕೆಯಾದರು. ಬಿಜೆಪಿಯ ನಾರಾಯಣಸಾ ಬಾಂಡಗೆ ಅವರು 47 ಮತಗಳನ್ನು ಪಡೆದಿದ್ದಾರೆ.