ಬೆಂಗಳೂರು: 7ನೇ ವೇತನ ಆಯೋಗ ವರದಿ ಬಳಿಕ ಸರ್ಕಾರಿ ನೌಕರರ ವೇತನ ಏರಿಕೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಹಳೇ ಪಿಂಚಣಿ ಜಾರಿ ಮತ್ತು ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಕುರಿತಾಗಿಯೂ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅಂತಿಮ ವರದಿ ನೀಡಲು ಕಾಲಾವಕಾಶ ಕೋರಿದ್ದು, ಮಾರ್ಚ್ 15 ರವರೆಗೆ ಸಮಯ ನೀಡಲಾಗಿದೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ವರದಿಯನ್ನು ಶೀಘ್ರ ಸಲ್ಲಿಸುವುದಾಗಿ ಹೇಳಿದ್ದು, ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ. ಶೀಘ್ರವೇ ಬೇಡಿಕೆ ಈಡೇರಿಸುತ್ತೇವೆ ಎಂದು ತಿಳಿಸಿದ್ದಾರೆ.