ಮಾಲಿ: ಫ್ರೀಕಿ ದೇಶದ ಮಾಲಿಯಲ್ಲಿ ಮಂಗಳವಾರ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆನಿಬಾದಲ್ಲಿ ಈ ಘಟನೆ ನಡೆದಿದ್ದು, ಬಸ್ ನದಿಯ ಮೇಲಿನ ಸೇತುವೆಯಿಂದ ಬಿದ್ದಾಗ ಈ ಘಟನೆ ಸಂಭವಿಸಿದೆ. ಬಸ್ ಬುರ್ಕಿನಾ ಫಾಸೊಗೆ ಹೋಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಪಶ್ಚಿಮ ಆಫ್ರಿಕಾದಲ್ಲಿ ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿದೆ. ಮಾಲಿಯ ಕಳಪೆ ರಸ್ತೆಗಳು ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಕಾರಣವೆಂದು ಉಲ್ಲೇಖಿಸಲಾಗಿದೆ. ಪ್ರಪಂಚದಾದ್ಯಂತದ ಎಲ್ಲಾ ರಸ್ತೆ ಸಾವುಗಳಲ್ಲಿ ಕಾಲು ಭಾಗದಷ್ಟು ಆಫ್ರಿಕಾದಲ್ಲಿ ಸಂಭವಿಸುತ್ತವೆ.