ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಬುಧವಾರ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಕಳೆದ ವಾರ, ಕೇಂದ್ರ ವಿದೇಶಾಂಗ ಸಚಿವಾಲಯದ ಅಡಿಯಲ್ಲಿ ಬರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿ (ಎಫ್ಆರ್ಆರ್ಒ) ಸಂತನ್ ಅವರಿಗೆ ತುರ್ತು ಪ್ರಯಾಣ ದಾಖಲೆಯನ್ನು ಒದಗಿಸಿದರು, ಇದು ಅವರನ್ನು ಶ್ರೀಲಂಕಾಕ್ಕೆ ತ್ವರಿತವಾಗಿ ವಾಪಸ್ ಕಳುಹಿಸಲು ಅನುವು ಮಾಡಿಕೊಟ್ಟಿತು.
ಸಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.